ನಮ್ಮವರ ನುಡಿಗಳನ್ನು ಮೆಚ್ಚುವುದನ್ನು ಬಿಟ್ಟು, ಅನ್ಯ ಭಾಷಿಕರ ನುಡಿಗಳನ್ನೇ ಹೆಚ್ಚಾಗಿ ಇಷ್ಟಪಡುತ್ತಾರೆ.
ಬಿಲ್ ಗೇಟ್ಸ್, ಸ್ಟೀವ್ ಜಾಬ್ಸ್, ಐನ್ಸ್ಟೀನ್ ಹೇಳಿದ ಮಾತುಗಳನ್ನೇ ಉವಾಚ ಮಾಡುತ್ತಾ,
ಕನ್ನಡದಲ್ಲೇನಿದೆ ಎಂದು ಅಕಳಿಸುತ್ತಾರೆ.
ಕುವೆಂಪು , ಬೇಂದ್ರೆ, ಮಾಸ್ತಿ, ವಿಶ್ವೇಶ್ವರಯ್ಯರಂತಹ ಇನ್ನು ಹಲವಾರು ಮಹನಿಯರ ಪಾದಧೂಳಿಯಿಂದ ಪುನಿತವಾದ ನಾಡು ನಮ್ಮ ಕನ್ನಡ ನಾಡು. ಕನ್ನಡದಲ್ಲೇ ಕನ್ನಡಿಗರು ಆಡಿದ ನುಡಿಗಳ ಸಂಗ್ರಹ ಇಲ್ಲಿದೆ..
ಬನ್ನಿ ಇನ್ನಾದರೂ ನಮ್ಮ ಕನ್ನಡಿಗರ ಮಾತುಗಳನ್ನು ಬಳಸೋಣ
ಸರಳತನವು ಪರಿಪೂರ್ಣತೆಯ ಲಕ್ಷಣ – ಪಂಡಿತ ತಾರಾನಾಥ.
ಕೊರಬೇಡಿ , ನಿಲ್ಲಬೇಡಿ, ಇಳಿಯ ಬೇಡಿ , ಏರುತ್ತಾ ಇರಿ – ಮಾಸ್ತಿ ವೆಂಕಟೇಶ ಅಯ್ಯಂಗಾರ್.
ಉತ್ತಮವಾದುದು ಶ್ರಮವಿಲ್ಲದೆ ಲಭಿಸದು , ಇಚ್ಹೆಯಿಲ್ಲದಿದ್ದರಂತೂ ಅದು ಸಾಧ್ಯವೇ ಅಲ್ಲ – ಕುವೆಂಪು .
ಸತ್ಯಕ್ಕೆ ಹೆದರುವವನು ಅಥವಾ ನಾಚುವವನು ನಿಜವಾದ ಜಿಜ್ಞಾಸುವಾಗಲಾರನು- ಕುವೆಂಪು .
ಲೋಕವೆಲ್ಲಾ ಬಗ್ಗುವುದು ಶ್ರೇಷ್ಠವಾದ ಬುದ್ದಿಗೆ ತಾನೇ ? – ಬಿ ಎಂ ಶ್ರೀಕಂಠಯ್ಯ.
ಜ್ಞಾನಕ್ಕೆ ವಿದ್ಯೆಯೂ , ವಿದ್ಯೆಗೆ ಓದು ಬರಹವೂ ತಳಹದಿ – ಬಿ ಎಂ ಶ್ರೀಕಂಠಯ್ಯ.
ಎಂತಹ ಕಟು ಅನುಭವ ಪ್ರಸಂಗ ಬಂದರೂ ಎದೆಗುಂದಬಾರದು.ಇದೇ ಸುಖಿ ಆಗಿರೋ ರಹಸ್ಯ.- ದಾ ರಾ ಬೇಂದ್ರೆ
ಬುದ್ದಿಯ ಜ್ಞಾನ ಬೇರೆ , ಹೃದಯದ ಜ್ಞಾನ ಬೇರೆ – ಜಿ ಪಿ ರಾಜರತ್ನಂ
ಅಪ್ರಿಯವಾದರು ಸತ್ಯವನ್ನು ಹೇಳಬೇಕಾದುದು ಹಿತೈಷಿಯ ಧರ್ಮ – ಅನಕೃ
ಹೋದ ಐಶ್ವರ್ಯ ಸಿಗಬಹುದು, ಹೋದ ಹೊತ್ತು ಸಿಗುವುದಿಲ್ಲ – ಅನಕೃ
ಮಾನವ ಭೂಮಿಯ ಮೇಲೆ ಇದ್ದುಕೊಂಡು ಸ್ವರ್ಗವನ್ನು ಗೆಲ್ಲುವ ಸಾಧನೆ ಮಾಡಬೇಕು – ವಿನಾಯಕ ಕೃಷ್ಣ ಗೋಕಾಕ
ಮರ್ತ್ಯದಲ್ಲಿ ನಿಂತು ಗೆಲ್ಲು, ಮರ್ತ್ಯವೇ ಒರೆಗಲ್ಲು .- ವಿನಾಯಕ ಕೃಷ್ಣ ಗೋಕಾಕ
ಪ್ರಾಣಿ ಜೀವನ ಮಿತವಾದದು , ಮನುಷ್ಯ ಜೀವನ ಬಹುಮುಖವಾದದು – ಶಿವರಾಮ ಕಾರಂತ
ಜನಾಂಗವನ್ನು ಶ್ರೇಷ್ಠ ಮಾಡುವುದಕ್ಕೆ ಒಂದೇ ದಾರಿ . ಜನರನ್ನು ಶ್ರೇಷ್ಠ ಮಾಡಬೇಕು – ಸರ್ ಎಂ ವಿಶ್ವೇಶ್ವರಯ್ಯ
ಹೆಚ್ಚು ಹೆಚ್ಚಾಗಿ ದುಡಿ — ಸರ್ ಎಂ ವಿಶ್ವೇಶ್ವರಯ್ಯ
ದುಡಿಮೆಗೆ ಗುರಿಯಿರಲಿ , ದುಡಿಯುವುದರಲ್ಲಿ ನಿಯಮವಿರಲಿ – ಸರ್ ಎಂ ವಿಶ್ವೇಶ್ವರಯ್ಯ
ನಿನ್ನ ದುಡಿಮೆಯಲ್ಲಿ ನೀನು ದಕ್ಷನಾಗು – ಸರ್ ಎಂ ವಿಶ್ವೇಶ್ವರಯ್ಯ
ದುಡಿಮೆಯಲ್ಲಿ ಸೇವಾ ಬುದ್ದಿಯಿರಲಿ – ಸರ್ ಎಂ ವಿಶ್ವೇಶ್ವರಯ್ಯ
ಇನ್ನೊಬ್ಬನ ಹುಚ್ಚುತನ ನಮಗೆ ಕಾಣಿಸುವಷ್ಟು ಸುಲಭವಾಗಿ , ನಮ್ಮದೇ ಹುಚ್ಚುತನ ನಮಗೆ ಕಾಣಿಸುತ್ತದೆಯೇ ? – ಶಿವರಾಮ ಕಾರಂತ
ಸತ್ಯ ದರ್ಶನವಾಗಬೇಕು ಎಂದರೆ ಅಹಂಕಾರ ವಿಸರ್ಜನೆಯಾಗಬೇಕು.- ತ ರಾ ಸುಬ್ಬರಾವ್
ತಾನು ಆಚರಿಸದೆ ಮತ್ತೊಬ್ಬರು ಮಾತ್ರ ಆಚರಿಸಬೇಕೆಂದು ದ್ವಿವಿಧವಾದುದು ಎಂದು ಧರ್ಮವೆನಿಸಿಕೊಳ್ಳುವುದಿಲ್ಲ – ತ ರಾ ಸುಬ್ಬರಾವ್
ನಾವು ಹುಟ್ಟಿದ ಸಮಾಜಕ್ಕೆ ಸಲ್ಲಿಸಬೇಕಾದ ಋಣ ಸಮಾಜ ಸೇವೆ – ಟಿ ಪಿ ಕೈಲಾಸಂ
ಏನಾದರು ಮಾಡುತಿರು ತಮ್ಮ ಸುಮ್ಮನಿರಬೇಡ – ಗೋಪಾಲ ಕೃಷ್ಣ ಅಡಿಗ
ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ -ಅಡಿಗರು
ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.- ಅನಕೃ
ಕಾಲವನ್ನು ನಾವು ಪಾಲಿಸಿದರೆ ಅದು ನಮಗೆ ವಿಧೇಯವಾಗಿರುತ್ತದೆ.–ಸರ್ ಎಂ.ವಿ
ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ — ಟಿ.ಪಿ.ಕೈಲಾಸಂ
ವಿದ್ಯಾರ್ಥಿ ಭತ್ತ ಬೆಳೆಯುವ ಗದ್ದೆಗಳಾಗಬೇಕು, ಬರಿಯ ಚೀಲಗಳಾಗಬಾರದು-— ಕುವೆಂಪು
ಮಾತು ಮನಸ್ಸುಗಳನ್ನು ಒಂದುಗೂಡಿಸಬೇಕೆ ಹೊರತು ಒಡೆಯಬಾರದು— ಮಾಸ್ತಿ
ಇವತ್ತಿನ ಹಾರೈಕೆ, ನಾಳಿನ ಪೂರೈಕೆ, ಇಂದಿನ ಕನಸು, ನಾಳೆಯ ನನಸು— ಕುವೆಂಪು
ನೀತಿಯ ನೆಲೆಗಟ್ಟಿಲ್ಲದ ವಾದವು ಮಾತಿನ ವ್ಯಭಿಚಾರ – ಎಸ್ ಎಲ್ ಭ್ಯರಪ್ಪ
ಯಲ್ಲಪ್ಪ ನಂದಿ
