ಆ ಆಹ ಆಹ ಆಹಹಾ .. ಓಹೊಹೋ ಓ ಹೊಹೊಹೊಹೋ
ನಾವಾಡುವ ನುಡಿಯೇ ಕನ್ನಡ ನುಡಿ, ಚಿನ್ನದ ನುಡಿ ಸಿರಿಗನ್ನಡ ನುಡಿ
ನಾವಿರುವ ತಾಣವೆ ಗಂಧದ ಗುಡಿ, ಅಂದದ ಗುಡಿ ಚೆಂದದ ಗುಡಿ
ನಾವಾಡುವ ನುಡಿಯೇ ಕನ್ನಡ ನುಡಿ, ನಾವಿರುವ ತಾಣವೆ ಗಂಧದ ಗುಡಿ
ಅಂದದ ಗುಡಿ ಗಂಧದ ಗುಡಿ, ಚೆಂದದ ಗುಡಿ ಶ್ರೀಗಂಧದ ಗುಡಿ
ಆಹಹಾ ಆಹಹಾ ಆಹಹಾ..ಆಹಹಾ ಆಹಹಾ ಆಹಹಾ ।। ಪಲ್ಲವಿ ।।

ಹಸುರಿನ ಬನಸಿರಿಗೇ ಒಲಿದು ಸೌಂದರ್ಯ ಸರಸ್ವತಿ ಧರೆಗಿಳಿದು
ಆಹಹಾ ಓ ಹೊ ಹೋ..ಆಆ ಓ ಹೋ
ಹರಿಯುವ ನದಿಯಲಿ ಈಜಾಡಿ ಹೂಬನದಲಿ ನಲಿಯುತ ಓಲಾಡಿ
ಚೆಲುವಿನ ಬಲೆಯ ಬೀಸಿದಳು ಈ ಗಂಧದ ಗುಡಿಯಲಿ ನೆಲೆಸಿದಳು
ಇದು ಯಾರ ತಪಸಿನ ಫಲವೋ ಈ ಕಂಗಳು ಮಾಡಿದ ಪುಣ್ಯವೋ ಓ ಹೊ ಹೋ..ಹಾಹ ।। ೧ ।।

ಚಿಮ್ಮುತ ಓಡಿವೆ ಜಿಂಕೆಗಳು ಕುಣಿದಾಡುತ ನಲಿದಿವೆ ನವಿಲುಗಳು
ಆಹಹಹಾ ಮುಗಿಲನು ಚುಂಬಿಸುವಾಸೆಯಲಿ ತೂಗಾಡುತ ನಿಂತ ಮರಗಳಲಿ
ಹಾಡುತಿರೆ ಬಾನಾಡಿಗಳು ಎದೆಯಲಿ ಸಂತಸದಾ ಹೊನಲು
ಇದು ವನ್ಯ ಮೃಗಗಳ ಲೋಕವೋ ಈ ಭೂಮಿಗೆ ಇಳಿದ ನಾಕವೋ ಆಹಹಾ.ಓಹೋ ।। ೨ ।।

ಚಿತ್ರ: ಗಂಧದ ಗುಡಿ (೧೯೭೩)
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಪಿ.ಬಿ. ಶ್ರೀನಿವಾಸ್
ಸಾಹಿತ್ಯ: ಚಿ. ಉದಯಶಂಕರ್
ಸಂಗೀತ: ರಾಜನ್-ನಾಗೇಂದ್ರ
ಗಾಯಕರು: ಪಿ.ಬಿ. ಶ್ರೀನಿವಾಸ್