ಕೇಳಿಸದೆ ಕಲ್ಲುಕಲ್ಲಿನಲಿ ಕನ್ನಡ ನುಡಿ, ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ, ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು ।। ಪಲ್ಲವಿ ।।
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ, ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ, ಕೇಳು ನೀನು ।। ಪಲ್ಲವಿ ।।
ಭೂರಮೆಯೆ ಆಧಾರ ಈ ಕಲೆಯ ಸಿಂಗಾರ
ಬಂಗಾರ ಮೇಲೇರಿ ಮೂಡಣವೇ ಸಿಂಗಾರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರಸ್ವರದ ಏರಿಳಿತ ತುಂಗೆಯಲಿ ಶ್ರೀಮಂತ
ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು ಓ ಓ.. ।। ೧ ।।
ಬಂಗಾರ ಮೇಲೇರಿ ಮೂಡಣವೇ ಸಿಂಗಾರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರಸ್ವರದ ಏರಿಳಿತ ತುಂಗೆಯಲಿ ಶ್ರೀಮಂತ
ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು ಓ ಓ.. ।। ೧ ।।
ಗಾಳಿಯೇ ಆದೇಶ ಮೇಘವೇ ಸಂದೇಶ
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತುಋತುಗಳು ನಿನ್ನ ಕಾದಿವೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವ ಮೈತಾಳಿ ಜೀವನದ ಜೋಕಾಲಿ
ಯುಗಯುಗಗಳೂ ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು ಓ ಓ.. ।। ೨ ।।
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತುಋತುಗಳು ನಿನ್ನ ಕಾದಿವೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವ ಮೈತಾಳಿ ಜೀವನದ ಜೋಕಾಲಿ
ಯುಗಯುಗಗಳೂ ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು ಓ ಓ.. ।। ೨ ।।
ಚಿತ್ರ: ಬೆಳ್ಳಿ ಕಾಲುಂಗುರ (೧೯೯೨)
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಹಂಸಲೆಖ
ಗಾಯಕರು: ಎಸ್.ಪಿ. ಬಾಲಸುಬ್ರಮಣ್ಯಂ ಮತ್ತು ಚಿತ್ರ
ಸಾಹಿತ್ಯ: ದೊಡ್ಡರಂಗೇಗೌಡ
ಸಂಗೀತ: ಹಂಸಲೆಖ
ಗಾಯಕರು: ಎಸ್.ಪಿ. ಬಾಲಸುಬ್ರಮಣ್ಯಂ ಮತ್ತು ಚಿತ್ರ